ರಾಮನಗರ

ಶಾಸಕ ಸಿ.ಪಿ.ಯೋಗೇಶ್ವರ್ ವಿರುದ್ಧ ಪತ್ನಿ ಹಾಗೂ ಪುತ್ರಿ ಕಾಂಗ್ರೆಸ್ ಹೈಕಮಾಂಡ್ ಗೆ ದೂರು.!

ರಾಮನಗರ:- ಚನ್ನಪಟ್ಟಣದ ಶಾಸಕ ಸಿ.ಪಿ.ಯೋಗೇಶ್ವರ್ ವಿರುದ್ಧ ಪತ್ನಿ ಹಾಗೂ ಪುತ್ರಿ ಕಾಂಗ್ರೆಸ್ ಹೈಕಮಾಂಡ್ ಗೆ ದೂರು ನೀಡಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಭೇಟಿಯಾದ ಪತ್ನಿ ಮಾಳವಿಕಾ ಸೋಲಂಕಿ ಹಾಗೂ ಪುತ್ರಿ ನಿಶಾ ಸಿ.ಪಿ ಯೋಗೇಶ್ವರ್ ವಿರುದ್ಧ ದೂರು ನೀಡಿದ್ದಾರೆ.
ದೂರಿನಲ್ಲಿ ತಮ್ಮದೇ ಕುಟುಂಬಕ್ಕೆ ತೊಂದರೆ ನೀಡುತ್ತಿದ್ದಾರೆ, ಜೊತೆಗೆ ಪದೇ ಪದೇ ಕೋರ್ಟ್ ಗಳಲ್ಲಿ ಕೇಸ್ ಹಾಕುತ್ತಿದ್ದಾರೆ. ಕಾನೂನಾತ್ಮಕವಾಗಿ ನಾವು ದೂರವಾಗಿಲ್ಲ. ಆದರೂ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ. ಇದನ್ನು ಸರಿಪಡಿಸಿಕೊಡಿ ಎಂದು ಮನವಿ ಮಾಡಿದ್ದಾರೆ.