ಚಿಕ್ಕಮಗಳೂರು:- ತಾಲೂಕಿನಲ್ಲಿ ರಸಗೊಬ್ಬರದ ಸಮಸ್ಯೆ ಇದ್ದರೆ ರೈತರು ಕೃಷಿಕ ಸಮಾಜದ ಗಮನಕ್ಕೆ ತಂದರೆ ಸಮಸ್ಯೆ ಬಗೆಹರಿಸಲು ಪ್ರಯತ್ನ ಮಾಡುತ್ತೇವೆ ಎಂದು ಜಿಲ್ಲಾ ಕೃಷಿಕ ಸಮಾಜದ ಪ್ರಧಾನ ಕಾರ್ಯದರ್ಶಿ ಪಿ.ಕೆ.ಬಸವರಾಜಪ್ಪ ಭರವಸೆ ನೀಡಿದರು. ಜಿಲ್ಲೆಯ ನರಸಿಂಹರಾಜಪುರದ ಕೃಷಿ ಇಲಾಖೆಯ ಕಚೇರಿಯಲ್ಲಿ ತಾಲೂಕು ಕೃಷಿಕ ಸಮಾಜದ ಆಡಳಿತ ಮಂಡಳಿಯ ದ್ವೈಮಾಸಿಕ ಸಭೆಯಲ್ಲಿ ಅವರು ಮಾತನಾಡಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಬಿ.ಕೆ.ನಾರಾಯಣಸ್ವಾಮಿ ಮಾತನಾಡಿ, ಕೃಷಿಕ ಸಮಾಜದ ಸಭೆಗೆ ಸಂಬಂಧಪಟ್ಟ ಎಲ್ಲಾ ಇಲಾಖೆಯ ಮುಖ್ಯ ಅಧಿಕಾರಿಗಳು ಹಾಜರಾಗಿ ಸಂಬಂಧ ಇಲಾಖೆಯ ಬಗ್ಗೆ ಮಾಹಿತಿ ನೀಡಬೇಕು. ಸಭೆಗೆ ಗೈರು ಹಾಜರಾದವರಿಗೆ ತಿಳುವಳಿಕೆ ಪತ್ರ ನೀಡಬೇಕು ಎಂದು ಸೂಚಿಸಿದರು.
ಸಭೆಯ ಅಧ್ಯಕ್ಷತೆಯನ್ನು ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಬಿ.ಕೆ.ನಾರಾಯಣಸ್ವಾಮಿ ವಹಿಸಿದ್ದರು. ಜಿಲ್ಲಾ ಕೃಷಿಕ ಸಮಾಜದ ಪ್ರಧಾನ ಕಾರ್ಯದರ್ಶಿ ಪಿ.ಕೆ.ಬಸವರಾಜಪ್ಪ, ತಾಲ್ಲೂಕು ಕೃಷಿಕ ಸಮಾಜದ ಉಪಾಧ್ಯಕ್ಷಡಿ.ಜಿ.ಮಂಜಪ್ಪಗೌಡ, ಪ್ರಧಾನ ಕಾರ್ಯದರ್ಶಿ ಎಚ್.ಕೆ.ನವೀನ್, ಖಜಾಂಚಿ ಬಿ.ಎಸ್.ಚೇತನ್, ಕಾರ್ಯಕಾರಿ ಸಮಿತಿಯ ಸದಸ್ಯರಾದ ವೈ.ಎಸ್.ಸುಬ್ರಹ್ಮಣ್ಯ, ತಿಮ್ಮಯ್ಯ, ಎನ್.ಎಲ್.ತೀರ್ಥೇಶ್, ಎಚ್.ಎಂ.ನಾಗರಾಜ್, ಎನ್.ಪಿ.ರಮೇಶ್, ವೈ.ಎಸ್.ರವಿ, ಎನ್.ಎಸ್.ರಂಜಿತ್, ಶ್ರೀನಿವಾಸ್ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ 2022–23ನೇ ಸಾಲಿನ ಆತ್ಮ ಯೋಜನೆಯಡಿ ಕೃಷಿ ಪ್ರಶಸ್ತಿ ಪಡೆದ ಬಿ.ವಿ.ದಿನೇಶ್ ಕುಮಾರ್ ಅವರಿಗೆ ಕೃಷಿ ಪ್ರಶಸ್ತಿ ಪ್ರಮಾಣ ಪತ್ರ ನೀಡಿ ಅಭಿನಂದಿಸಲಾಯಿತು.