ಶಿವಮೊಗ್ಗ

ಸಿಗಂದೂರು ಸೇತುವೆಯನ್ನು ಇಸ್ಸ್ಟಾಗ್ರಾಂನಲ್ಲಿ ಹಂಚಿಕೊಂಡ ಸಂಸದ ರಾಘವೇಂದ್ರ

ಶಿವಮೊಗ್ಗ:- ಜಿಲ್ಲೆಯ ಸಾಗರ ತಾಲೂಕಿನಲ್ಲಿ ಇರುವ ಪ್ರಸಿದ್ಧ ಯಾತ್ರಾಸ್ಥಳ ಸಿಗಂದೂರು, ಚೌಡೇಶ್ವರಿ ಅಮ್ಮನವರು ಇಲ್ಲಿ ನೆಲೆನಿಂತು ಭಕ್ತರನ್ನು ಹರಸುತ್ತಾಳೆ. ತಾಯಿಯನ್ನು ಸಿಗಂದೂರೇಶ್ವರಿ ಎಂದೂ ಕರೆಯುತ್ತಾರೆ. ಸಿಗಂಧೂರಿಗೆ ಬರುವ ಪ್ರವಾಸಿಗರ ಪ್ರಮುಖ ಆಕರ್ಷಣೆ ಇಲ್ಲಿನ ಲಾಂಚ್.

ಸದ್ಯ, ಸಿಗಂದೂರು ಸೇತುವೆ ಕಾಮಗಾರಿ ಬಹುತೇಕ ಮುಕ್ತಾಯಗೊಂಡಿದ್ದು, ಸದ್ಯದಲ್ಲೇ ಪ್ರವಾಸಿಗರಿಗೆ ಈ ಸೇತುವೆ ಮುಕ್ತವಾಗಲಿದೆ. ಸದ್ಯ, ಸೇತುವೆಯ ಲೋಡ್ ಟೆಸ್ಟಿಂಗ್ ದೃಶ್ಯ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದ್ದು, ಎಲ್ಲರ ಗಮನ ಸೆಳೆದಿದೆ. ಈ ವಿಡಿಯೋವನ್ನು ಬಿ.ವೈ ರಾಘವೇಂದ್ರ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.