ಬೆಂಗಳೂರು:- ಸಿ.ಎಂ.ಇಬ್ರಾಹಿಂ ವಿರುದ್ಧ ವಿಧಾನ ಪರಿಷತ್ ಸದಸ್ಯರಾದ ರವಿ ಕುಮಾರ್ ಆಕ್ರೋಶ ಹೊರ ಹಾಕಿದ್ದಾರೆ. ಅವರು ಜೆಡಿಎಸ್ ಪಕ್ಷಕ್ಕೆ ಉಳಿಗಾಲವಿಲ್ಲ ಎಂಬ ಹೇಳಿಕೆಗೆ ಮಾತನಾಡಿ, ರಾಜ್ಯಸಭೆ ಸದಸ್ಯರನ್ನಾಗಿ ಮಾಡಿ ಕೇಂದ್ರದಲ್ಲಿ ಸಚಿವರನ್ನಾಗಿ ಮಾಡಿದ್ದರು. ಇಡೀ ಕರ್ನಾಟಕ ನನ್ನ ಜೇಬಿನಲ್ಲಿದೆ ಎಂದು ಇಬ್ರಾಹಿಂ ಮಾತನಾಡುತ್ತಾರೆ.
ಇಬ್ರಾಹಿಂ ಜೆಡಿಎಸ್ ಬಗ್ಗೆ ಮಾತನಾಡಬೇಕಾದರೆ ಎಲ್ಲಾದರೂ ಒಂದು ಕ್ಷೇತ್ರದಲ್ಲಿ ಗೆದ್ದು ಬರಲಿ, ಜೆಡಿಎಸ್ ಪಕ್ಷಕ್ಕೆ ಮಾಜಿ ಪ್ರಧಾನಿ ದೇವೇಗೌಡರು ಅಡಿಪಾಯ ಹಾಕಿ ಬೆಳಸಿದ್ದಾರೆ. ಎನ್ ಡಿ ಎ ನೇತೃತ್ವದಲ್ಲಿ ಅಧಿಕಾರಕ್ಕೆ ಬಂದೇ ಬರುತ್ತೇವೆ ಎಂದು ಹೇಳಿದ್ದಾರೆ.