ಬೆಂಗಳೂರು

ಹೆಬ್ಬಾಳ ವಿಸ್ತರಿತ ಫ್ಲೈಓವರ್ ಇಂದು ಉದ್ಘಾಟನೆ

ಬೆಂಗಳೂರು:- ಹೆಬ್ಬಾಳ ವಿಸ್ತರಿತ ಫ್ಲೈಓವರ್ ಇಂದು (ಆ.18) ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಉದ್ಘಾಟಿಸಲಿದ್ದಾರೆ.

700 ಮೀಟರ್ ಉದ್ದದ ಹೆಬ್ಬಾಳ ಪ್ಲೈ ಓವರ್ ಸುಮಾರು 80 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿದೆ. ಈ ಫ್ಲೈಓವರ್ ಕೆ.ಆರ್ ಪುರಂ ಕಡೆಯಿಂದ ಮೇಖ್ರೀ ಸರ್ಕಲ್‌ವರೆಗೆ ನಿರ್ಮಾಣ ಮಾಡಲಾಗಿದೆ. ಇದರ ಕಾಮಗಾರಿಯು 2023ರಲ್ಲಿ ಆರಂಭ ಆಗಿದ್ದು, ಒಂದೂವರೆ ವರ್ಷಗಳ ಬಳಿಕ ಫ್ಲೈಓವರ್ ಕಾರ್ಯ ಪೂರ್ಣಗೊಂಡಿದೆ.

ಇಂದು ಬೆಳಗ್ಗೆ 9 ಗಂಟೆಗೆ ಫೈಓವರ್ ಉದ್ಘಾಟನೆ ಆಗಲಿದ್ದು, ಇದೀಗ ಉದ್ಘಾಟನೆಗೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಸಿಬ್ಬಂದಿ ಫ್ಲೈಓವರ್ ರ‍್ಯಾಂಪ್‌ಗೆ ಹೂವುಗಳ ಸರಮಾಲೆ ಹಾಕಿ ಸಿದ್ಧತೆ ಮಾಡುತ್ತಿದ್ದಾರೆ. ಈ ಫ್ಲೈಓವರ್‌ನಿಂದ ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆ ನಿವಾರಣೆಯಾಗಲಿದೆ.

Leave feedback about this

  • Quality
  • Price
  • Service

PROS

+
Add Field

CONS

+
Add Field
Choose Image
Choose Video