ಹಾವೇರಿ:- ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹಾವೇರಿ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಗೆದ್ದೇ ಗೆಲ್ಲತ್ತೆ ಎಂದು ಸಿ.ಎಂಚುನಾವಣೆಗಳ ಭರವಸೆ ವ್ಯಕ್ತಪಡಿಸಿದರು. ನೀವು ಕಾಂಗ್ರೆಸ್ ಪಕ್ಷಕ್ಕೆ, ಈ ಸರ್ಕಾರಕ್ಕೆ ಕೊಟ್ಟ ಮತಗಳಿಗೆ ನಾವು ಘನತೆಯಿಂದ ಗೌರವಿಸಿದ್ದೇವೆ. ಚುನಾವಣೆಗೆ ಮೊದಲು ಕೊಟ್ಟ ಮಾತಿನಂತೆ ಐದಕ್ಕೆ ಐದೂ ಗ್ಯಾರಂಟಿಗಳನ್ನೂ ಜಾರಿಗೊಳಿಸಿ ನಿಮ್ಮ ಮತಗಳ ತೂಕ ಹೆಚ್ಚಿಸಿದ್ದೇವೆ ಎಂದರು.
ಗ್ಯಾರಂಟಿಗಳಿಂದ ಖಜಾನೆ ಖಾಲಿ ಆಗಿದೆ ಎಂದು ಬಿಜೆಪಿ, ಜೆಡಿಎಸ್ ಮಾಡುತ್ತಿರುವ ಹಸಿ ಹಸಿ ಸುಳ್ಳು ನಂಬಬೇಡಿ. ಕಳೆದ ವರ್ಷದ ಬಜೆಟ್ ಗಾತ್ರಕ್ಕಿಂತ ಈ ಬಾರಿಯ ಬಜೆಟ್ ಗಾತ್ರ 38 ಸಾವಿರ ಕೋಟಿ ಹೆಚ್ಚಾಗಿದೆ. ಮಾತ್ರವಲ್ಲ ಈ ಬಾರಿ ಬಂಡವಾಳ ವೆಚ್ಚ 83 ಸಾವಿರ ಕೋಟಿ ತೆಗೆದಿರಿಸಿದ್ದೀವಿ. ಕಳೆದ ವರ್ಷಕ್ಕಿಂತ 31 ಸಾವಿರ ಕೋಟಿ ಬಂಡವಾಳ ವೆಚ್ಚ ಹೆಚ್ಚಾಗಿದೆ. ಇದಲ್ಲದೆ ಹೆಚ್ಚುವರಿವಾಗಿ 50 ಸಾವಿರ ಕೋಟಿ ರೂಪಾಯಿಗಳನ್ನು ಗ್ಯಾರಂಟಿಗಳಿಗೆ ತೆಗೆದಿಟ್ಟಿದ್ದೇವೆ. ಒಟ್ಟು ಒಂದು ಲಕ್ಷದ 33 ಸಾವಿರ ಕೋಟಿ ರೂಪಾಯಿಯನ್ನು ಅಭಿವೃದ್ಧಿ ಕಾರ್ಯಗಳಿಗೆ ತೆಗೆದಿಟ್ಟಿದ್ದೀವಿ. ಇದುವೆಲ್ಲವೂ ಬಿಜೆಪಿಯ ಹಸಿ ಸುಳ್ಳುಗಳ ಸಂಪ್ರದಾಯಕ್ಕೆ ಉದಾಹರಣೆ ಎಂದು ಈ ಸಂದರ್ಭದಲ್ಲಿ ಹೇಳಿದರು.
ಜಿಲ್ಲೆಯಲ್ಲಿ ಸುಮಾರು 650 ಕೋಟಿಗಳ ವಿವಿಧ ಕಾಮಗಾರಿಯನ್ನು ಶಂಕುಸ್ಥಾಪನೆ ಹಾಗೂ ಜನಾರ್ಪಣೆಗೊಳಿಸಿ ಮಾಡಿದರು.