ಉಡುಪಿ:- ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹೋಂ ಗಾರ್ಡ್ ಅವಹೇಳಕನಕಾರಿ ಕಮೆಂಟ್ ಮಾಡಿದ್ದಾನೆ.
ಸಿಎಂ ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ ಎಂದು ಕಾಮೆಂಟ್ ಹಾಕಿದ್ದ ಉಡುಪಿ ಜಿಲ್ಲೆಯ ಕಾರ್ಕಳದ ಹೋಂ ಗಾರ್ಡ್ ಸಂಪತ್ ಸಾಲಿಯಾನ್ ಬಂಧನವಾಗಿದೆ.
ಬೆಂಗಳೂರಿನ ಹೋಂ ಗಾರ್ಡ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಸಂಪತ್ ಸಾಲಿಯಾನ್ ಎನ್ನುವಾತ ಸಿಎಂ ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ ಎಂದು ಸಂಪತ್ ಸಾಮಾಜಿಕ ಜಾಲತಾಣದಲ್ಲಿ ಕಮೆಂಟ್ ಹಾಕಿದ್ದಾನೆ. ಈ ಸಂಬಂಧ ಸದ್ಯ ಕಾರ್ಕಳ ಪೊಲೀಸರು ಹೋಂ ಗಾರ್ಡ್ ಸಂಪತ್ನನ್ನು ಬಂಧಿಸಿದ್ದಾರೆ.
ಸುಹಾಸ್ ಶೆಟ್ಟಿಯನ್ನು ಕೊಂದವರು, ಕೊಂದವರ ಮನೆಯವರು, ಅಲ್ಲಿ ಯಾರು ಸಿಗುತ್ತಾರೆ ಅವರನ್ನು ಕೊಚ್ಚಿ ಕೊಲ್ಲುತ್ತೇವೆ ಎಂದು ಧನುಷ್.ಸಿ ಎಂಬುವರು ಸೆಲ್ಫಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದ ಫೇಸ್ಬುಕ್ ಫೋಸ್ಟ್ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತಣ್ಣೀರುಪಂಥ ನಿವಾಸಿ ಧನುಷ್.ಸಿ ಪುಂಜಾಲಕಟ್ಟೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಕೋಮುದ್ವೇಷ ಹರಡಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವಂಥ ಪ್ರಚೋದನಾತ್ಮಕ ವಿಡಿಯೋವನ್ನು ಪ್ರಸಾರಮಾಡಿದ ಹಿನ್ನೆಲೆಯಲ್ಲಿ ಬಿಎನ್ಎಸ್ 196(1)(A), 353(1)(C)ರ ಅಡಿ ಪ್ರಕರಣ ದಾಖಲಾಗಿದೆ.