ಚಿಕ್ಕಮಗಳೂರು

ಈ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಚಿಕ್ಕಮಗಳೂರು:- ಕರ್ನಾಟಕದ ಹವಾಮಾನ ಇಲಾಖೆ ರಾಜ್ಯದ 21 ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು ಸೇರಿದಂತೆ ದಕ್ಷಿಣ ಕನ್ನಡ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಮತ್ತು ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುಂಗಾರು ಐದು ದಿನ ಮುಂಚಿತವಾಗಿ ಕರ್ನಾಟಕಕ್ಕೆ ಆಗಮಿಸಲಿದೆ ಎಂದು ತಿಳಿಸಿದೆ.
ಮಂಗಳವಾರ ರಾತ್ರಿ ಬೆಂಗಳೂರಿನಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದೆ. ಇದು ಎರಡು ವಾರಗಳಿಂದ ಬಿಸಿಲಿನ ತಾಪದಿಂದ ಕಂಗೆಟ್ಟಿದ್ದ ನಗರವಾಸಿಗಳಿಗೆ ತಂಪು ತಂದಿದೆ. ಇಂದು ಕೂಡ ಬೆಂಗಳೂರಿನಲ್ಲಿ ಮಳೆಯ ಸಾಧ್ಯತೆಯಿದೆ. ರಾಜ್ಯದ ಇತರ ಭಾಗಗಳಾದ ಹಿಡಕಲ್, ನಿಪ್ಪಾಣಿ, ಬೀದರ್, ಆಲಮಟ್ಟಿ, ಮಂಗಳೂರು, ಹುಣಸಗಿ, ಮುಲ್ಕಿ, ಮತ್ತು ಗೌರಿಬಿದನೂರಿನಲ್ಲಿ ಈಗಾಗಲೇ ಮಳೆಯಾಗಿದೆ. ಕಲಬುರಗಿಯಲ್ಲಿ 40.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದ್ದು, ರಾಜ್ಯದ ಅತ್ಯಂತ ಬಿಸಿಯ ಸ್ಥಳವಾಗಿದೆ.