ಅಹಮದಾಬಾದ್:- ಇಂದು ಬೆಳಗ್ಗೆ ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಅಹಮದಾಬಾದ್ ಗೆ ಆಗಮಿಸಿದ ಪ್ರಧಾನಿ ಮೋದಿ ಸೇರಿದಂತೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜರಾಪು, ಕೇಂದ್ರ ಸಚಿವ ಮುರಳೀಧರ್ ಮೊಹೋಲ್ ಮತ್ತು ರಾಜ್ಯ ಗೃಹ ಸಚಿವ ಹರ್ಷ ಸಂಘವಿ ಆಗಮಿಸಿ ನೇರವಾಗಿ ಮೇಘನಿ ನಗರ ಪ್ರದೇಶದ ಅಪಘಾತದ ಸ್ಥಳಕ್ಕೆ ಕಾರಿನಲ್ಲಿ ಭೇಟಿ ನೀಡಿದರು. ದುರ್ಘಟನೆಯಲ್ಲಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುವನ್ನು ಮೋದಿಯವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಅಪಘಾತ ಸಂಭವಿಸಿದ ಬಳಿಕ ನಿರಂತರವಾಗಿ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದ ಪ್ರಧಾನಿ ಮೋದಿ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರನ್ನು ತಕ್ಷಣ ಅಹಮದಾಬಾದ್‌ಗೆ ತೆರಳುವಂತೆ ಸೂಚನೆ ನೀಡಿದ್ದರು. ಇದಕ್ಕೂ ಮೊದಲು ಪ್ರಧಾನಿ ಮೋದಿ ಅವರು ಅಹಮದಾಬಾದ್ ಸಿವಿಲ್ ಆಸ್ಪತ್ರೆಗೆ ಭೇಟಿ ನೀಡಿ, ವಿಮಾನ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿರುವ ಹಾಸ್ಟೇಲ್ ವಿದ್ಯಾರ್ಥಿಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಅಹಮದಾಬಾದ್‌ನಲ್ಲಿ ನಡೆದ ದುರಂತ ಘಟನೆಯ ನಂತರ, ಅಂತರರಾಷ್ಟ್ರೀಯ ನಾಗರಿಕ ವಿಮಾನಯಾನ ಸಂಸ್ಥೆ ನಿಗದಿಪಡಿಸಿರುವ ಅಂತರರಾಷ್ಟ್ರೀಯ ನಿಯಮಗಳಿಗೆ ಅನುಗುಣವಾಗಿ ವಿಮಾನ ಅಪಘಾತ ತನಿಖಾ ಬ್ಯೂರೋ (ಇದು ನಾಗರಿಕ ವಿಮಾನಯಾನ ಸಚಿವಾಲಯದ ಅಡಿಯಲ್ಲಿ ಸ್ವತಂತ್ರ ನಿಯಂತ್ರಕ ಸಂಸ್ಥೆಯಾಗಿದೆ) ಔಪಚಾರಿಕ ತನಿಖೆಯನ್ನು ಪ್ರಾರಂಭಿಸಿದೆ ಎಂದು ಸಾಮಾಜಿಕ ಜಾಲತಾಣ ಎಸ್‌ನಲ್ಲಿ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜರಾಪು ಅವರು ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಹೆಚ್ಚುವರಿಯಾಗಿ, ದುರ್ಘಟನೆಯ ಕುರಿತು ವಿವರವಾಗಿ ಪರಿಶೀಲಿಸಲು ಸರ್ಕಾರ ಕೂಡ ಬಹು ವಿಭಾಗಗಳ ತಜ್ಞರನ್ನು ಒಳಗೊಂಡ ಉನ್ನತ ಮಟ್ಟದ ಸಮಿತಿಯನ್ನು ರಚಿಸುತ್ತಿದೆ ಎಂದು ತಿಳಿಸಿದ್ದಾರೆ. ವಿಮಾನ ದುರಂತ ಸಂಭವಿಸುತ್ತಿದ್ದಂತೆ ಪ್ರಧಾನಿ ಮೋದಿ ಟ್ವೀಟ್ ಮಾಡಿ ಆಘಾತ ಮತ್ತು ದುಃಖ ವ್ಯಕ್ತಪಡಿಸಿದ್ದರು. ಅಹಮದಾಬಾದ್‌ನಲ್ಲಿ ನಡೆದ ದುರಂತವು ನಮನ್ನು ದಿಗ್ಭಮೆಗೊಳಿಸಿದೆ ಮತ್ತು ದುಃಖಿಸಿದೆ. ಇದು ಪದಗಳಿಗೆ ಮೀರಿದ ಹೃದಯವಿದ್ರಾವಕವಾಗಿದೆ ಎಂದು ಹೇಳಿದ್ದಾರೆ.
ಟಾಟಾ ಗ್ರೂಪ್ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ತಲಾ 1 ಕೋಟಿ ರೂ. ಪರಿಹಾರ ಘೋಷಿಸಿದೆ. ಏರ್ ಇಂಡಿಯಾ ಮತ್ತು ಟಾಟಾ ಸ್ಸ್ ಅಧ್ಯಕ್ಷ ಎನ್.ಚಂದ್ರಶೇಖರನ್ ಎಕ್‌್ಸನಲ್ಲಿ ಈ ಬಗ್ಗೆ ಪ್ಟೋ ಮಾಡಿ, ಏರ್ ಇಂಡಿಯಾವು ಸಂತ್ರಸ್ತರ ಕುಟುಂಬಗಳ ಬೆಂಬಲಕ್ಕೆ ನಿಲ್ಲಲಿದೆ ಎಂದು ಭರವಸೆ ನೀಡಿದ್ದಾರೆ. ವಿಮಾನ ದುರಂತ ಘಟನೆಯ ಬಳಿಕ ವಿಮಾನ ನಿಲ್ದಾಣದಲ್ಲಿ ಎಲ್ಲಾ ವಿಮಾನ ಕಾರ್ಯಾಚರಣೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು. ಘಟನೆ ಬೆನ್ನಲ್ಲೇ ವಿಮಾನ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಅತ್ಯಂತ ಎಚ್ಚರಿಕೆಯಿಂದ ಅನುಸರಿಸಲಾಗುತ್ತಿದ್ದು, ಅಹಮದಾಬಾದ್ ವಿಮಾನ ನಿಲ್ದಾಣವು ಸಂಜೆ 4.05 ರಿಂದ ವಿಮಾನ ಕಾರ್ಯಾಚರಣೆಗಳಿಗೆ ಲಭ್ಯವಿರಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ವಿಮಾನದಲ್ಲಿ ಇಬ್ಬರು ಮಕ್ಕಳು ಮತ್ತು 10 ಸಿಬ್ಬಂದಿ ಸೇರಿದಂತೆ 232 ಪ್ರಯಾಣಿಕರಿದ್ದರು ಎಂದು ವಾಯುಯಾನ ನಿಯಂತ್ರಕ, ನಾಗರಿಕ ವಿಮಾನಯಾನ ನಿರ್ದೇಶನಾಲಯ ಮಾಹಿತಿ ನೀಡಿದೆ.
ವಿಮಾನವು ಟೇಕ್ ಆ ಆದ ಐದು ನಿಮಿಷಗಳಲ್ಲೇ ವಸತಿ ಪ್ರದೇಶವಾದ ಮೇಘಾನಿ ನಗರದಲ್ಲಿ ಕುಸಿದು ಬಿದ್ದಿದೆ. ಪೈಲಟ್ ಇನ್ ಕಮಾಂಡ್ ಸುಮಿತ್ ಸಭರ್ವಾಲ್ ಮತ್ತು ಸಹ-ಪೈಲಟ್ ಕ್ಲೈವ್ ಕುಂದರ್ ಕಾಕ್‌ಪಿಟ್‌ನಲ್ಲಿದ್ದರು. ದೂರದಿಂದಲೇ ಹೊಗೆ ಸ್ಪಷ್ಟವಾಗಿ ಕಾಣಿಸಿಕೊಂಡಿತ್ತು ಎಂದು ಅದು ಹೇಳಿದೆ.
ವಿಮಾನದಲ್ಲಿದ್ದ 230 ಪ್ರಯಾಣಿಕರ ಪೈಕಿ 169 ಭಾರತೀಯರು, 53 ಬ್ರಿಟಿಷ್ ಪ್ರಜೆಗಳು, 7 ಪೋರ್ಚುಗೀಸ್ ಪ್ರಜೆಗಳು ಮತ್ತು ಓರ್ವ ಕೆನಡಾ ಇದ್ದರು. ಬದುಕುಳಿದ ಏಕೈಕ ವ್ಯಕ್ತಿ ಭಾರತೀಯ ಮೂಲದ ಬ್ರಿಟಿಷ್ ಪ್ರಜೆಯಾಗಿದ್ದಾರೆ ಎಂದು ಏರ್ ಇಂಡಿಯಾ ಖಚಿತಪಡಿಸಿದೆ.
ಇದೇ ವೇಳೆ ಏರ್ ಇಂಡಿಯಾ ವಿಮಾನ ಅಪಘಾತ ನಡೆದ ಸ್ಥಳಕ್ಕೆ ಬ್ರಿಟಿಷ್ ಹೈಕಮಿಷನ್ ಕಚೇರಿಯ ಹಿರಿಯ ಅಧಿಕಾರಿಗಳೂ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಈ ದುರ್ಘಟನೆಯಲ್ಲಿ 53 ಬ್ರಿಟನ್ ಪ್ರಜೆಗಳು ಸಾವನ್ನಪ್ಪಿದ್ದಾರೆ ಎಂಬುದು ಇಲ್ಲಿ ಉಲ್ಲೇಖನೀಯ.