ಚಿಕ್ಕಬಳ್ಳಾಪುರ

ಬಾಗೇಪಲ್ಲಿ ಭಾಗ್ಯನಗರವಾಗಿ ಹೊರ ಹೊಮ್ಮಲಿದೆ

ಚಿಕ್ಕಬಳ್ಳಾಪುರ:- ಜಿಲ್ಲೆಯಲ್ಲಿನ ಆಂಧ್ರಪ್ರದೇಶದ ಗಡಿಗೆ ಹೊಂದಿಕೊಂಡಿರುವ ತಾಲೂಕು ಬಾಗೇಪಲ್ಲಿ. ಪಲ್ಲಿ ಎಂದರೆ ತೆಲುಗು ಭಾಷೆಯಲ್ಲಿ ಹಳ್ಳಿ ಎಂದರ್ಥ, ಈ ಹೆಸರನ್ನು ಬದಲಿಸಬೇಕು ಎಂದು 2020ರಲ್ಲಿ ತಾಲೂಕಿನಲ್ಲಿ ಅಭಿಯಾನವೇ ಶುರುವಾಗಿತ್ತು. ಬಾಗೇಪಲ್ಲಿಯನ್ನು ಭಾಗ್ಯನಗರ ಎಂದು ಬದಲಿಸುವಂತೆ ಒತ್ತಾಯ ಕೇಳಿಬಂದಿತ್ತು. ಚಿಕ್ಕಬಳ್ಳಾಪುರದ ನಂದಿಬೆಟ್ಟದಲ್ಲಿ ನಡೆಯಲಿರುವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲು ರಾಜ್ಯ ಸರ್ಕಾರ ಮುಂದಾಗಿದೆ.