ಬೆಂಗಳೂರು:- ಇಬ್ಬರು ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಅವರಿಂದು ದೆಹಲಿಗೆ ತೆರಳಿದ್ದಾರೆ, ಕೆಂಪೇಗೌಡ ಏರ್ಪೋರ್ಟ್ನಿಂದ ಏರ್ ಇಂಡಿಯಾದ ವಿಮಾನದ ಮೂಲಕ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಿದರು.
ಸಿಎಂ ಸಿದ್ದರಾಮಯ್ಯಗೆ ಸಚಿವ ಭೈರತಿ ಸುರೇಶ್, ಸಚಿವ ಕೆ.ಜೆ.ಜಾರ್ಜ್ ಸಾಥ್ ನೀಡಿದರು. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ಆಯೋಜನೆ ಸಂಬಂಧ ಇಂದು ಸಂಜೆ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಲಿದ್ದು, ಸಮಾಲೋಚನೆ ನಡೆಸಲಿದ್ದಾರೆ.
ಬಳಿಕ ಕಾಂಗ್ರೆಸ್ ಹೈಕಮಾಂಡ್ ಜೊತೆಗೆ ಚರ್ಚೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ವಿಧಾನ ಪರಿಷತ್ ಸದಸ್ಯರ ಆಯ್ಕೆ ಸಂಬಂಧ ಚರ್ಚೆ ನಡೆಸುವ ಸಾಧ್ಯತೆಯಿದೆ ಎನ್ನಲಾಗಿದೆ.