ಬೆಂಗಳೂರು:- ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ LKG ಯಿಂದ PUC ಓದುವ ವಿದ್ಯಾರ್ಥಿಗಳಿಗೆ ಸರ್ಕಾರ ಉಚಿತ ಬಸ್ ಪ್ರಯಾಣ ಘೋಷಿಸಿದೆ. ಈ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಪ್ರಮುಖ ಒತ್ತು ನೀಡಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ ಗೆ ಸ್ಪಷ್ಟನೆ ನೀಡಿರುವ ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ, ಶಾಲಾ ಮಕ್ಕಳಿಗೆ ಫ್ರೀ ಬಸ್ ಪಾಸಿಗೆ ಡಿ.ಕೆ ಶಿವಕುಮಾರ್ ಸಲಹೆ ನೀಡಿದ್ದಾರಷ್ಟೇ, ಇದು ಕೇವಲ ಸಲಹೆ. ಇದಕ್ಕೆ ಸಂಪುಟದಲ್ಲಿ ಒಪ್ಪಿಗೆ ಬೇಕು. ಕೆಪಿಎಸ್ ಶಾಲೆಯ ಗಂಡುಮಕ್ಕಳಿಗೆ ಉಚಿತ ಬಸ್ ಪಾಸ್ ಇಲ್ಲ. ಶಾಲೆಯಲ್ಲಿ ಓದುವ ಹೆಣ್ಣು ಮಕ್ಕಳಿಗೆ ಈಗಾಗಲೇ ಫ್ರೀ ಇದೆ. ಈ ಯೋಜನೆಗೆ 10 ಕೋಟಿ ರೂಪಾಯಿ ಹೆಚ್ಚು ಖರ್ಚಾಗುತ್ತದೆ ಎಂದಿದ್ದಾರೆ.
