ಚಿಕ್ಕಮಗಳೂರು:- ಜಿಲ್ಲೆಯ ನರಸಿಂಹರಾಜಪುರ ತಾಲ್ಲೂಕಿನ ಮಡಬೂರಿನ ಹೆಚ್.ಟಿ ರಾಜೇಂದ್ರರವರು ಇತ್ತೀಚಿಗೆ ನಿಧನರಾದರು. ಜೆಡಿಎಸ್ ಪಕ್ಷದ ಹಿರಿಯ ರಾಜ್ಯ ಉಪಾಧ್ಯಕ್ಷರಾಗಿ ವಿವಿಧ ಹುದ್ದೆಯನ್ನು ಅಲಂಕರಿಸಿದ್ದ ಅವರು ಜೆಡಿಎಸ್ ವರಿಷ್ಠ ದೇವೇಗೌಡರ ಅತ್ಯಂತ ನಿಕಟವರ್ತಿಯಲ್ಲಿ ಒಬ್ಬರಾಗಿದ್ದರು.
ಪಕ್ಷದ ಸಂಘಟನೆಯ ಉದ್ದೇಶದಿಂದ ರಾಜ್ಯ ಪ್ರವಾಸ ಕೈಗೊಂಡಿರುವ ನಿಖಿಲ್ ಕುಮಾರಸ್ವಾಮಿರವರು ಶೃಂಗೇರಿ ವಿಧಾನ ಸಭಾ ಕ್ಷೇತ್ರದ ಕಾರ್ಯಕ್ರಮಕ್ಕೆ ಆಗಮಿಸಿದ ಸಂದರ್ಭದಲ್ಲಿ ರಾಜೇಂದ್ರರವರ ಮಡಬೂರಿನ ನಿವಾಸಕ್ಕೆ ಆಗಮಿಸಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
ಈ ಸಂದರ್ಭದಲ್ಲಿ ಒಕ್ಕಲಿಗ ಸಮುದಾಯ ಮುಖಂಡರಾದ ದ್ವಾರಮಕ್ಕಿ ಸತೀಶ್, ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಸುಬಾನ್, ಸುಧಾಕರ್, ರಘು ಇತರರು ಉಪಸ್ಥಿತರಿದ್ದರು.
Leave feedback about this