ಬೆಂಗಳೂರು:- ಸಮಾಜದಲ್ಲಿ ಅಶಾಂತಿಗೆ ಕಾರಣವಾಗಿರುವ ಸುಳ್ಳು ಸುದ್ದಿ ಹಾಗೂ ದ್ವೇಷ ಭಾಷಣಗಳಿಗೆ ಸಂಪೂರ್ಣ ಕಡಿವಾಣ ಹಾಕಲು ಇದೇ ಅಧಿವೇಶದಲ್ಲಿ ಹೊಸ ಕಾನೂನು ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.
ಅವರು ಮಾಧ್ಯಮದೊಂದಿಗೆ ಮಾತನಾಡಿ, ಕಳೆದ ಕೆಲವು ಸಮಯದಿಂದ ಕರಾವಳಿಯಲ್ಲಿ ಶಾಂತಿ ಕದಡುವ ವಾತಾವರಣ ಕಂಡುಬಂದಿದ್ದು, ಅದನ್ನು ನಿಯಂತ್ರಣಕ್ಕೆ ತರಲಾಗಿದೆ. ಮುಂದೆ ಅಂತಹ ಘಟನೆಗಳು ಮರುಕಳಿಸದೆ, ಸೌಹಾರ್ದತೆಯ ವಾತಾವರಣ ಕಲ್ಪಿಸುವ ಉದ್ದೇಶದಿಂದ ಈ ಸಭೆಯನ್ನು ಕರೆಯಲಾಗಿದೆ.
ಇಲ್ಲಿ ಪ್ರಸ್ತಾಪಗೊಂಡ ವಿಚಾರಗಳನ್ನು ಮುಖ್ಯಮಂತ್ರಿ, ಸಂಬಂಧಿತ ಸಚಿವರೊಂದಿಗೆ ಚರ್ಚಿಸಿ ಮುಂದಿನ ದಿನಗಳಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವ ಪರಮೇಶ್ವರ್ ಎಂದಷ್ಟೇ ಹೇಳಿದರು.
Leave feedback about this