Uncategorized

ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ.!

ಉ ಕನ್ನಡ:- ಜನಪ್ರಿಯ ಟಿವಿ ರಿಯಾಲಿಟಿ ಶೋ ”ಕಾಮಿಡಿ ಕಿಲಾಡಿಗಳು” ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಅರಣ್ಯದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯಲ್ಲಾಪುರ ತಾಲೂಕಿನ ಕಟ್ಟಿಗೆ ಗ್ರಾಮದ ಕಾಡಿನಲ್ಲಿ ಘಟನೆ ನಡೆದಿದೆ.

ವಜ್ರಹಳ್ಳಿ ಜೀವನಹಳ್ಳಿ ಗ್ರಾಮದ ಚಂದ್ರಶೇಖರ ಸಿದ್ದಿ ಅವರು ನೀನಾಸಂನಲ್ಲಿ ನಾಟಕ ತರಬೇತಿ ಪಡೆದುಕೊಂಡಿದ್ದರು. ಕೂಲಿ ಕೆಲಸಕ್ಕೆ ಹೋಗುತ್ತಿದ್ದ ಕಲಾವಿದ ಚಂದ್ರಶೇಖರ ಸಿದ್ದಿ ಯಾವುದೇ ಪಾತ್ರಗಳು ಸಿಗದೇ ಮಾನಸಿಕವಾಗಿ ನೊಂದು ಕುಗ್ಗಿ ಹೋಗಿದ್ದರು ಎನ್ನಲಾಗಿದೆ. ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಮಿಡಿ ಕಿಲಾಡಿಗಳು ಶೋನಲ್ಲಿ ಭಾಗವಹಿಸಿದ ಬಳಿಕ ಚಂದ್ರಶೇಖರ ಸಿದ್ದಿಗೆ ಯಾವುದೇ ಪಾತ್ರಗಳು ಸಿಕ್ಕಿರಲಿಲ್ಲ, ಹೀಗಾಗಿ ಅವರು ಕೂಲಿ ಕೆಲಸಕ್ಕೆ ಹೋಗುತ್ತಿದ್ದರು. ಮಾನಸಿಕವಾಗಿ ನೊಂದು ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

Leave feedback about this

  • Quality
  • Price
  • Service

PROS

+
Add Field

CONS

+
Add Field
Choose Image
Choose Video