ದಕ್ಷಿಣ ಕನ್ನಡ

ರೋಗಿಗಳಿಗೆ ಸರ್ಕಾರದಿಂದಲೇ ಸಿಟಿ, ಎಂಆರ್ ಐ ಸ್ಕ್ಯಾನ್ ಮಾಡಲಾಗುವುದು.- ಆರೋಗ್ಯ ಸಚಿವ ದಿನೇಶ್

ಮಂಗಳೂರು:- ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಇನ್ಮಂದೆ ರೋಗಿಗಳಿಗೆ ಸರ್ಕಾರದಿಂದಲೇ ಸಿಟಿ, ಎಂಆರ್ ಐ ಸ್ಕ್ಯಾನ್ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ವೆನ್ಸಾಕ್ ಜಿಲ್ಲಾಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸಭೆಯಲ್ಲಿ ಮಾತನಾಡಿ, ರೋಗಿಗಳಿಗೆ ಮತ್ತಷ್ಟು ಉತ್ತಮ ಸೇವೆ ನೀಡುವುದು ಉದ್ದೇಶದಿಂದ ಜಿಲ್ಲಾ ಆಸ್ಪತ್ರೆಗಳಲ್ಲಿ ಸರಕಾರದ ವತಿಯಿಂದಲೇ ಸಿಟಿ ಮತ್ತು ಎಂಆರ್ ಐ ಸ್ಕ್ಯಾನ್ ವ್ಯವಸ್ಥೆಗೆ ಸೂಚಿಸಲಾಗಿದೆ, ಈಗಾಗಲೇ ವೆನಾಕ್‌ನಲ್ಲಿ ಸಿಟಿ ಮತ್ತು ಎಂಆರ್‌ಐ ಸ್ಕ್ಯಾನ್ ಸಂಬಂಧ ಖಾಸಗಿ ಸಂಸ್ಥೆ ಜತೆ ಒಡಂಬಡಿಕೆಯಾಗಿದೆ ಎಂದರು.

ವೆನ್ಸಾಕ್ ಆಸ್ಪತ್ರೆಯಲ್ಲಿ ನೂತನವಾಗಿ ಸಿದ್ದಗೊಂಡಿರುವ ಕ್ಯಾಥ್‌ಲ್ಯಾಬ್ ಶೀಘ್ರ ಕಾರ್ಯಾರಂಭಿಸಲಿದ್ದು, ಬಿಪಿಎಲ್ ಪಡಿತರ ಚೀಟಿದಾರರಿಗೆ ಅಂಜಿಯೋಪ್ಲಾಸ್ಟಿ ಮೂಲಕ ಸ್ಟಂಟ್ ಅಳವಡಿಕೆ ಸೇರಿದಂತೆ ಹೃದ್ರೋಗ ಶಸ್ತ್ರಚಿಕಿತ್ಸೆಗಳು ಉಚಿತವಾಗಿರಲಿದೆ. ಆದರೆ, ಆಂಜಿಯೋಗ್ರಾಂಗೆ ನಿಯಮಗಳ ಪ್ರಕಾರ ಬಿಪಿಎಲ್‌ದಾರರಿಗೆ 5,000 ರೂ. ಕನಿಷ್ಠ ದರ ನಿಗದಿ ಪಡಿಸಲಾಗಿದೆ. ಉಚಿತವಾಗಿ ಮಾಡುವ ನಿಟ್ಟಿನಲ್ಲಿ ಚರ್ಚಿಸಿ ಕ್ರಮವಹಿಸಲಾಗುವುದು ಎಂದು ಹೇಳಿದ್ದಾರೆ.

Leave feedback about this

  • Quality
  • Price
  • Service

PROS

+
Add Field

CONS

+
Add Field
Choose Image
Choose Video