ಕೊಪ್ಪಳ

ಕೊಪ್ಪಳದಲ್ಲಿ ಲವ್ ಬ್ರೇಕಪ್ ಮರ್ಡರ್

ಕೊಪ್ಪಳ:- ನಗರದ ಮಸೀದಿ ಮುಂದೆಯೇ ಯುವಕನೊಬ್ಬನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆಯೊಂದು ಭಾನುವಾರ ರಾತ್ರಿ ನಡೆದಿದ್ದು, ಪ್ರೀತಿ ವಿಚಾರಕ್ಕೆ ಮರ್ಡರ್ ಆಗಿದೆ ಎಂಬ ಶಾಕಿಂಗ್ ಮಾಹಿತಿ ಹೊರಬಿದ್ದಿದೆ.

ಕೊಪ್ಪಳದ ಸಾದಿಕ್ ಕೋಲ್ಕಾರ್ ಎಂಬುವವನು ಗವಿಸಿದ್ದಪ್ಪ ನಾಯಕ್ನನ್ನು ಕೊಲೆ ಮಾಡಿದ್ದಾನೆ, ಸದ್ಯ ಗವಿಸಿದ್ದಪ್ಪ ನಾಯಕ್ ತಂದೆ ನಿಂಗಜ್ಜ ಟಣಕನಲ್ ಆರೋಪಿ ಸಾದಿಕ್ ಸೇರಿ ನಾಲ್ವರ ವಿರುದ್ಧ ದೂರು ದಾಖಲಿಸಿದ್ದಾರೆ. ಕೊಲೆ ಮಾಡಿದ ಬಳಿಕ ಸಾದಿಕ್ ನೇರವಾಗಿ ನಗರ ಠಾಣೆಗೆ ಬಂದು ಶರಣಾಗಿದ್ದಾನೆ, ಆತನ ಮೇಲೆ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.

ಕಳೆದ ಎರಡು ವರ್ಷಗಳಿಂದ ಗವಿಸಿದ್ದಪ್ಪ, ಗೌರಿ ಅಂಗಳ ಏರಿಯಾದ ಅಪ್ರಾಪ್ತ ಯುವತಿಯನ್ನು ಪ್ರೀತಿಸುತ್ತಿದ್ದನು. ಇಬ್ಬರು ಮನೆಬಿಟ್ಟು ಓಡಿ ಹೋಗಿದ್ದರು. ಇದೇ ವಿಚಾರಕ್ಕೆ ಕೊಲೆ ನಡೆದಿದೆ ಎನ್ನಲಾಗಿದೆ. ಸಾದಿಕ್ನೊಂದಿಗೆ ಲವ್ ಬ್ರೇಕಪ್ ಮಾಡಿಕೊಂಡ ಯುವತಿ ಗವಿಸಿದ್ದಪ್ಪನನ್ನು ಪ್ರೀತಿಸಲು ಶುರು ಮಾಡಿದ್ದಳು. ಇದರಿಂದ ಕೋಪಗೊಂಡಿದ್ದ ಸಾದಿಕ್ ನಡುರಸ್ತೆಯಲ್ಲಿ ಕೊಚ್ಚಿ ಕೊಲೆ ಮಾಡಿದ್ದಾನೆ.

ಕೊಲೆ ಮಾಡೋಕು ಮುನ್ನ ಸಾದಿಕ್ ಮಚ್ಚು ಹಿಡಿದು ರೀಲ್ಸ್ ಮಾಡಿ ಬಿಲ್ಡಪ್ ಕೊಟ್ಟಿದ್ದ ಎನ್ನಲಾಗಿದೆ. ಇನ್‌ಸ್ಟಾಗ್ರಾಂನಲ್ಲಿ ಸ್ಟೇಟಸ್ ಹಾಕಿಕೊಂಡಿದ್ದನು ಬಳಿಕ ರಾತ್ರಿ 7.30ಕ್ಕೆ ಗವಿಸಿದ್ದಪ್ಪನನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ. ಇವನ ಜತೆ ಇನ್ನೂ ಮೂವರು ಭಾಗಿಯಾಗಿರೋ ಬಗ್ಗೆ ಅನುಮಾನ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave feedback about this

  • Quality
  • Price
  • Service

PROS

+
Add Field

CONS

+
Add Field
Choose Image
Choose Video