ಬೆಂಗಳೂರು:- ನಾಳೆ ಬೆಂಗಳೂರಿಗೆ ರಾಹುಲ್ ಗಾಂಧಿ ಭೇಟಿ ನೀಡುತ್ತಿರುವ ಹಿನ್ನೆಲೆ ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ.
ಅತಿಗಣ್ಯ ವ್ಯಕ್ತಿಗಳು ಭೇಟಿ ನೀಡಲಿರುವ ಪ್ರಯುಕ್ತ ಈ ಕೆಳಕಂಡ ರಸ್ತೆಗಳಲ್ಲಿ ಎಲ್ಲಾ ಮಾದರಿಯ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ ಮತ್ತು ಈ ಕೆಳಕಂಡ ಸಮಯದ ಅವಧಿಯಲ್ಲಿ ಈ ಕೆಳಕಂಡ ರಸ್ತೆಗಳ ಬದಲಾಗಿ ಪರ್ಯಾಯ ರಸ್ತೆಗಳನ್ನು ಬಳಸಲು ಕೋರಿದೆ.
ಬೆಳಗ್ಗೆ 10:30 ಗಂಟೆಯಿಂದ 11:30 ಗಂಟೆಯವರೆಗೆ ಹಳೆ ವಿಮಾನ ನಿಲ್ದಾಣ ರಸ್ತೆ. ಎಂ.ಜಿ.ರಸ್ತೆ. ಕಬ್ಬನ್ ರಸ್ತೆ. ಸಂಜೆ 03:30 ಗಂಟೆಯಿಂದ 04:30 ಗಂಟೆಯವರೆಗೆ ಹಳೆ ವಿಮಾನ ನಿಲ್ದಾಣ ರಸ್ತೆ. ಎಂ.ಜಿ.ರಸ್ತೆ.
ಕಬ್ಬನ್ ರಸ್ತೆ.
ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣಾ ಸರಹದ್ದಿನ ಫ್ರೀಡಂ ಪಾರ್ಕ್ನಲ್ಲಿ ದಿನಾಂಕ 08.08.2025 ರಂದು ಪ್ರತಿಭಟನೆಯನ್ನು ಇರುವುದರಿಂದ, ಶೇಷಾದ್ರಿ ರಸ್ತೆ, ಫ್ರೀಡಂ ಪಾರ್ಕ್ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಟಿಯಿಂದ ಈ ಕೆಳಕಂಡ ಸಂಚಾರ ಮಾರ್ಪಾಡುಗಳನ್ನು ಮಾಡಲಾಗಿದೆ.
ನಿರ್ಬಂಧಿಸಲಾದ ಸಂಚಾರಕ್ಕೆ ಪರ್ಯಾಯ ಮಾರ್ಗ
ಶಾಂತಲಾ ಜಂಕ್ಷನ್ ಮತ್ತು ಖೋಡ್ ಸರ್ಕಲ್ ನಿಂದ ಆನಂದ ರಾವ್ ಪ್ರೈ ಓವರ್, ಓಲ್ಡ್ ಜೆ.ಡಿ.ಎಸ್. ಕ್ರಾಸ್, ಶೇಷಾದ್ರಿ ರಸ್ತೆಯಿಂದ ಫ್ರೀಡಂ ಪಾರ್ಕ್ ಕಡೆಗೆ ಸಂಚರಿಸುವ ವಾಹನಗಳು ಲುಲು ಮಾಲ್, ಕೆಎಫ್‌ಎಂ, ರಾಜೀವ್ ಗಾಂಧಿ ಸರ್ಕಲ್, ಮಂತ್ರಿ ಮಾಲ್, ಸ್ವಸ್ತಿಕ್ ಸರ್ಕಲ್, ಶೇಷಾದ್ರಿಪುರಂ, ನೆಹರು ಸರ್ಕಲ್, ರೇಸ್ ಕೋರ್ಸ್ ಪ್ರೈ ಓವರ್. ರೇಸ್ ಕೋರ್ಸ್ ರಸ್ತೆ ಮೂಲಕ ಸಂಚರಿಸುವುದು.
ಮೈಸೂರು ಬ್ಯಾಂಕ್ ಕಡೆಯಿಂದ ಚಾಲುಕ್ಯ ಸರ್ಕಲ್ ಕಡೆಗೆ
ಕೆ.ಜಿ ರಸ್ತೆ, ಮೈಸೂರು ಬ್ಯಾಂಕ್ ಜಂಕ್ಷನ್, ಸಾಗರ್ ಜಂಕ್ಷನ್, ಕೆ.ಜಿ ಜಂಕ್ಷನ್, ಎಲೈಟ್, ಟಿಬಿ ರಸ್ತೆ, ಕೆ.ಎಫ್.ಎಂ, ರಾಜೀವ್ ಗಾಂಧಿ ಸರ್ಕಲ್, ಸ್ವಸ್ತಿಕ್, ನೆಹರು ಸರ್ಕಲ್, ರೇಸ್ ಕೋರ್ಸ್ ಪ್ರೈ ಓವರ್ ರಸ್ತೆ ಮೂಲಕ ಸಂಚರಿಸುವುದು.
ಚಾಲುಕ್ಯ ಸರ್ಕಲ್ ನಿಂದ ಮೈಸೂರು ಬ್ಯಾಂಕ್ ಕಡೆಗೆ
ಚಾಲುಕ್ಯ ಸರ್ಕಲ್, ಎಲ್‌ಆರ್ಡಿ, ರಾಜಭವನ ರಸ್ತೆ, ಇನ್ ಪೆಂಟ್ರಿ ರಸ್ತೆ, ಇಂಡಿಯನ್ ಎಕ್ಸ್ಪ್ರೆಸ್ ನಿಂದ ತೆರಳುವುದು. ಕಾಳಿದಾಸ ರಸ್ತೆ ಕನಕದಾಸ ಜಂಕ್ಷನ್ ಕಡೆಯಿಂದ ಫ್ರೀಡಂ ಪಾರ್ಕ್ ಕಡೆಗೆ ಸಂಚರಿಸುವ ವಾಹನಗಳು ಕನಕದಾಸ ಜಂಕ್ಷನ್ ಬಲ ತಿರುವು ಪಡೆದು ಸಾಗರ ಜಂಕ್ಷನ್ ಕಡೆಗೆ ಸಂಚರಿಸಬಹುದಾಗಿದೆ.
ಮೌರ್ಯ/ಸುಬ್ಬಣ್ಣ ಜಂಕ್ಷನ್ ನಿಂದ ಫ್ರೀಡಂ ಪಾರ್ಕ್ ಕಡೆಗೆ ಸಂಚರಿಸುವ ವಾಹನಗಳು ಸುಬ್ಬಣ್ಣ ಜಂಕ್ಷನ್ ನಿಂದ ಬಲ ತಿರುವು ಆನಂದ್ ರಾವ್ ಸರ್ಕಲ್ ಕಡೆಗೆ ಸಂಚರಿಸಬಹುದಾಗಿದೆ.
Leave feedback about this