ಬೆಂಗಳೂರು:- ನಗರದ ರಾಡಿಸನ್ ಬ್ಲೂ ಹೋಟೆಲಿನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ಜರುಗಿದೆ. ಸಭೆಯಲ್ಲಿ ಮಾಜಿ ಸಚಿವ ರಾಜಣ್ಣ ಅವರು ಕೆಲವೇ ಕ್ಷಣಗಳಲ್ಲಿ ಸಭೆಯಿಂದ ತೆರಳಿದರು.
ಸಭೆಯ ಆರಂಭದಲ್ಲೇ ಕೆ.ಎನ್ ರಾಜಣ್ಣ ತಲೆದಂಡ ಕುರಿತು ಮಾಹಿತಿ ನೀಡಿದ ಸಿಎಂ, ರಾಜಣ್ಣರನ್ನ ಸಚಿವ ಸಂಪುಟದಿಂದ ವಜಾ ಮಾಡಬೇಕಾದ ಪರಿಸ್ಥಿತಿ ನಿರ್ಮಾಣ ಆಯ್ತು. ಅವರು ಮಾತನಾಡಿದ ಉದ್ದೇಶ ಬೇರೆಯೇ ಆಗಿದ್ದರೂ ಹೇಳಿದ ರೀತಿ ಸರಿ ಇರಲಿಲ್ಲ. ಆ ತಪ್ಪಿನಿಂದಾಗಿ ರಾಜಣ್ಣರನ್ನ ಸಂಪುಟದಿಂದ ಕೈ ಬಿಡಬೇಕಾಯಿತು. ರಾಹುಲ್ ಗಾಂಧಿ ಅವರ ನಿರ್ದೇಶನದ ಮೇಲೆ ರಾಜಣ್ಣರನ್ನ ಸಂಪುಟದಿಂದ ಕೈಬಿಡಲಾಗಿದೆ ಎಂದು ವಿವರಿಸಿದರು.
Leave feedback about this