ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್ ತೂಗುದೀಪ ಸೇರಿ 7 ಜನ ಆರೋಪಿಗಳ ಜಾಮೀನು ರದ್ದಾಗಿದೆ. ಮೊದಲಿನಿಂದಲೂ ನಟಿ ರಮ್ಯಾ ಅವರು ಈ ಕೇಸ್ ವಿಚಾರವಾಗಿ ದರ್ಶನ್ ವಿರೋಧಿಸುತ್ತಲೇ ಬಂದಿದ್ದರು. ಈಗ ಜಾಮೀನು ರದ್ದಾಗುತ್ತಿದ್ದಂತೆ ಪೋಸ್ಟ್ ಹಂಚಿಕೊಂಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಇತರರಿಗೆ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪು ಇಂದು ಬಲವಾದ ಸಂದೇಶವನ್ನು ರವಾನಿಸಿದೆ. ಕಾನೂನಿನ ಮುಂದೆ ಎಲ್ಲರೂ ಸಮಾನರು. ಉಳಿದವರಿಗೆ ನಾನು ಹೇಳುವುದೇನೆಂದರೆ ನ್ಯಾಯಯುತ ಪ್ರಕ್ರಿಯೆಯನ್ನು ಅನುಸರಿಸಿ, ನ್ಯಾಯ ವ್ಯವಸ್ಥೆಯಲ್ಲಿ ನಂಬಿಕೆ ಇರಿಸಿ. ಕಾನೂನನ್ನು ನಿಮ್ಮ ಕೈಗೆ ತೆಗೆದುಕೊಳ್ಳಬೇಡಿ, ನ್ಯಾಯವು ಸಿಗುತ್ತೆ. ಎಲ್ಲಕ್ಕಿಂತ ಮುಖ್ಯವಾಗಿ, ನಿಮ್ಮ ಆತ್ಮಸಾಕ್ಷಿಗೆ ತಕ್ಕಂತೆ ಇರಿ” ಎಂದು ರಮ್ಯಾ ಪೋಸ್ಟ್ ಹಂಚಿಕೊಂಡಿದ್ದಾರೆ.
Leave feedback about this