ಉಡುಪಿ:- ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಅದರಂತೆ ಇಂದಿನಿಂದ ಕರಾವಳಿ ಜಿಲ್ಲೆಗಳು, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಸೇರಿ ಐದು ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ನೀಡಿದ್ದು, ವ್ಯಾಪಕ ಮಳೆಯಾಗುವ ನಿರೀಕ್ಷೆ ಇದೆ. ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ನಿನ್ನೆಯಿಂದ 19ರವರೆಗೆ ಕರ್ನಾಟಕ ಕರಾವಳಿಯಲ್ಲಿ ಮತ್ತು ಹೊರಗೆ ಗಂಟೆಗೆ 40 – 50 ಕಿ.ಮೀ ನಿಂದ 60 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ.
ಆಗಸ್ಟ್ 18 ಅಂದರೆ ನಾಳೆಯಿಂದ ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಸೇರಿ ನಾಲ್ಕು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದ್ದು, ಅತಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು, ಧಾರವಾಡ, ಗದಗ, ಬೆಳಗಾವಿ ಬಾಗಲಕೋಟೆ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಿದ್ದು, ಬಿರುಸಿನ ಮಳೆಯಾಗಲಿದೆ. ಇನ್ನುಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಹಗುರದಿಂದ ಸಾಧಾರಣ ಮಳೆಯಾಗಲಿದೆ.
ಆಗಸ್ಟ್ 19ರಂದು ಉತ್ತರ ಕನ್ನಡ ಉಡುಪಿ ಜಿಲ್ಲೆಗೆ ರೆಡ್ ಅಲರ್ಟ್ ನೀಡಿದ್ದು, ಅತಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇನ್ನು ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರ, ಶಿವಮೊಗ್ಗ, ಹಾಸನ, ಧಾರವಾಡ, ಬೆಳಗಾವಿ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಿದ್ದು, ಬಿರುಸಿನ ಮಳೆಯಾಗಲಿದೆ. ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಬಿರುಗಾಳಿ ಸಹಿತ ಸಾಧಾರಣ ಮಳೆಯಾಗಲಿದೆ.
ಆಗಸ್ಟ್ 20ರಂದು ಕರಾವಳಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.
Leave feedback about this