ದಾವಣಗೆರೆ:- ಮಾಜಿ ಸಚಿವ ಕೆ.ಎನ್ ರಾಜಣ್ಣ ಅವರಂತೇ ಶಾಸಕ ಶಿವಲಿಂಗೇಗೌಡರ ವಿರುದ್ಧವೂ ಕೂಡ ಶಿಸ್ತು ಕ್ರಮ ಕೈಗೊಳ್ಳಲಿ ಎಂದು ಚನ್ನಗಿರಿ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು ಪಕ್ಷದ ಹೈಕಮಾಂಡ್‌ಗೆ ಆಗ್ರಹ ಮಾಡಿದ್ದಾರೆ.
ಅರಸೀಕೆರೆ ಶಾಸಕ ಶಿವಲಿಂಗೇಗೌಡ ಅವರು ಜನರಿಗೆ ಏಳು ಕೋಟಿ ರೂಪಾಯಿ ಹಂಚಿಕೆ ಮಾಡಿರುವ ಹೇಳಿಕೆಯ ಆಡಿಯೋ ವೈರಲ್ ವಿಚಾರವಾಗಿ ದಾವಣಗೆರೆಯ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಶಿವಲಿಂಗೇಗೌಡರು ಇಂತಹ ಹೇಳಿಕೆ ಕೊಡುವುದು ತಪ್ಪು. ಒಬ್ಬ ಹಿರಿಯ ಶಾಸಕರೇ ಈ ರೀತಿ ಹೇಳಿಕೆ ಕೊಟ್ಟರೆ ಪಕ್ಷಕ್ಕೆ ಡ್ಯಾಮೇಜ್ ಆಗುತ್ತದೆ. ಈ ರೀತಿ ಯಾರೂ ಮಾತನಾಡಬಾರದು. ಪಕ್ಷದ ವಿರುದ್ಧವಾಗಿ ಹೇಳಿಕೆ ಕೊಟ್ಟು ಈಗ ರಾಜಣ್ಣ ಅನುಭವಿಸುತ್ತಿದ್ದಾರೆ. ಆಡಿಯೋವನ್ನು ಕೆಪಿಸಿಸಿ ಅಧ್ಯಕ್ಷರು ಪಡೆದು ಶಿವಲಿಂಗೇಗೌಡರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಿ ಎಂದು ಒತ್ತಾಯಿಸಿದ್ದಾರೆ.
Leave feedback about this